ಲೇಖನಗಳು
ಕರ್ನಾಟಕ ರಾಜಕಾರಣದ ರಕ್ಷಣಾ ಪರ್ವವು
`ಜಾತ್ಯತೀತತೆಯ ರಕ್ಷಣೆ' ಮತ್ತು `ಸ್ವ ಪಕ್ಷ ರಕ್ಷಣೆ'ಗಳೆರಡರ ಹೊಣೆಯನ್ನೂ ಹೊತ್ತ ಕುಟುಂಬವೊಂದಿದ್ದರೆ ಅದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರದ್ದು. ಈ `ರಕ್ಷಣೆ'ಗಳ ಕಾರಣಕ್ಕಾಗಿ ಅದು ಕೆಲವು ತೀರ್ಮಾನಗಳನ್ನು ಕೈಗೊಳ್ಳುತ್ತದೆ. ಇವು ಕೌಟುಂಬಿಕ ತೀರ್ಮಾನವಾಗಿದ್ದರೂ ಅದನ್ನು ಜೆಡಿಎಸ್ ಎಂಬ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು ಕೈಗೊಂಡಂತೆ ಇರುತ್ತವೆ. ಇಲ್ಲವೇ ಪಕ್ಷ ಸಂಘಟನೆಯಲ್ಲಿ/ಸರಕಾರದಲ್ಲಿ ಇರುವ ಅವರ ಮಕ್ಕಳು ಕೈಗೊಂಡಂತೆ ಕಾಣಿಸುತ್ತವೆ. ತೀರಾ ಮುಖ್ಯವಾದ ವಿಚಾರವಾಗಿದ್ದರೆ ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಮಾರ್ಗದರ್ಶನದಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಕೈಗೊಂಡಂತೆ ಇರುತ್ತದೆ. Read more »
- Add new comment
- 2232 reads
ತೇಜಸ್ವಿ ನೆನಪು
ತೇಜಸ್ವಿಯವರ ಕಿರಗೂರಿನ ಗಯ್ಯಾಳಿಗಳು ಕತೆಯ ಆರಂಭದ ಸಾಲುಗಳು ಹೇಳುವಂತೆ `ಎಲ್ಲಾ ಶುರುವಾಗಿದ್ದು ಕಿರಗೂರಿನ ಮೇಲೆ ಮೂರು ರಾತ್ರಿ, ಮೂರು ಹಗಲು ಇದ್ದಕ್ಕಿದ್ದಂತೆ ಬೀಸಿದ ಬಿರುಗಾಳಿಯ ದೆಸೆಯಿಂದ'. ನನಗೂ ತೇಜಸ್ವಿ ಪರಿಚಯವಾಗಿದ್ದು ಹೀಗೆಯೇ. Read more »
- 15 comments
- 4625 reads
ಕನ್ನಡವೆಂಬ ಸಸ್ಯಾಹಾರಿ ಭಾಷೆ
ಹಾರುವವುಗಳಲ್ಲಿ ವಿಮಾನವನ್ನೂ, ಎರಡು ಕಾಲಿನವುಗಳಲ್ಲಿ ಮನುಷ್ಯರನ್ನೂ, ನಾಲ್ಕು ಕಾಲಿನವುಗಳಲ್ಲಿ ಕುರ್ಚಿ, ಮೇಜುಗಳನ್ನು ಮಾತ್ರ ತಿನ್ನದೇ ಬಿಟ್ಟಿರುವ ನನ್ನಂಥ ಕನ್ನಡಿಗರಿಗೆ ಈ ಪ್ರಶ್ನೆ ಆಗಾಗ ಕಾಡುತ್ತಿರುತ್ತದೆ. Read more »
- 6 comments
- 4001 reads
ಚಾರ್ಲ್ಸ್ ಮಿನೆಜೆಸ್ ಎಂಬ ಜೋಸೆಫ್ ಕೆ.
ಕಳೆದ ವರ್ಷ ಅಂದರೆ 2005ರ ಜುಲೈ ತಿಂಗಳಲ್ಲಿ ಲಂಡನ್ ಸ್ಫೋಟ ಸಂಭವಿಸಿತು. ಈ ಘಟನೆಯ ನಂತರ ಬ್ರೆಜಿಲ್ ನ ಯುವಕನೊಬ್ಬನನ್ನು ಲಂಡನ್ ಪೊಲೀಸರು 'ತಪ್ಪಾಗಿ' ಕೊಂದು ಬಿಟ್ಟರು. ಇದೇ ಹೊತ್ತಿಗೆ ಕಾಶ್ಮೀರದಲ್ಲೂ ಸೇನಾ ಪಡೆಗಳು ಮಕ್ಕಳನ್ನು ಉಗ್ರಗಾಮಿಗಳೆಂದು ಭಾವಿಸಿ ಕೊಂದ ಘಟನೆಯೂ ನಡೆದಿತ್ತು. ಆಗ ಬರೆದ ಲೇಖನ ಇದು.
- Add new comment
- 2424 reads
ನಾದಯೋಗಿಯ ಮೇಲೊಂದು ಪ್ರಯೋಗ
ಗುರು ನಿತ್ಯಚೈತನ್ಯ ಯತಿ 1924ರಲ್ಲಿ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಮುರಿಞಕಲ್ಲ್ ಎಂಬಲ್ಲಿ ಹುಟ್ಟಿದರು. 1952ರಲ್ಲಿ ಶ್ರೀ ನಾರಾಯಣಗುರುಗಳ ಉತ್ತರಾಧಿಕಾರಿಯಾಗಿದ್ದ ಶ್ರೀ ನಟರಾಜಗುರುಗಳ ಶಿಷ್ಯತ್ವ ಸ್ವೀಕರಿಸಿದರು. ತತ್ವಶಾಸ್ತ್ರ ಮತ್ತು ಮನೋವಿಜ್ಞಾನದ ವಿದ್ವಾಂಸರಾಗಿದ್ದ ಶ್ರೀ ನಿತ್ಯಚೈತನ್ಯ ಯತಿ ಇಂಗ್ಲಿಷ್ ಹಾಗೂ ಮಲೆಯಾಳಂನಲ್ಲಿ ಹಲವು ಗ್ರಂಥಗಳನ್ನು ರಚಿಸಿದ್ದಾರೆ. 1999ರಲ್ಲಿ ಸಮಾಧಿಸ್ಥರಾಗುವವರೆಗೂ ಫರ್ನ್ ಹಿಲ್ಸ್‌ನ ನಾರಾಯಣ ಗುರುಕುಲಂ ಮತ್ತು ಈಸ್ಟ್ ವೆಸ್ಟ್ ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿದ್ದರು. ಯತಿಗಳ `ಮರಕ್ಕಾನಾವತ್ತವರ್' ಪುಸ್ತಕದಲ್ಲಿರುವ ಇಬ್ಬರು ಅಸಾಧಾರಣ ಯೋಗಿಗಳ ಕುರಿತ ಲೇಖನದ ಆಯ್ದ ಭಾಗದ ಭಾವಾನುವಾದ ಇಲ್ಲಿದೆ.
1964ರಲ್ಲಿ ಯಾವುದೋ ಕಾರಣಕ್ಕಾಗಿ ಋಷಿಕೇಶಕ್ಕೆ ಹೋಗಿ ಶಿವಾನಂದಾಶ್ರಮದಲ್ಲಿ ಉಳಿದುಕೊಳ್ಳಬೇಕಾಯಿತು. ಅಲ್ಲಿರುವ ಒಂದು ಕಟ್ಟಡದಿಂದ ರಾತ್ರಿ ಹಗಲೆನ್ನದೆ ಹಾಡು ಕೇಳಿಬರುತ್ತಿತ್ತು. ಈ ಹಾಡಿನ ಮಾಧುರ್ಯಕ್ಕೆ ಮಾರುಹೋದ ನಾನು ಆ ಕಟ್ಟಡ ಬಾಗಿಲನ್ನೊಮ್ಮೆ ತಟ್ಟಿ ನೋಡಿದೆ. ಆಗ ಹಾಡು ನಿಂತು ಬಾಗಿಲು ತೆರೆದುಕೊಂಡಿತು.
ಬಾಗಿಲು ತೆರೆದದ್ದು ಸುಮಾರು ಐವತ್ತರ ಆಸುಪಾಸಿನಲ್ಲಿದ್ದ ಒಬ್ಬ ಸನ್ಯಾಸಿ. ಕಾವಿಧಾರಿ. ಮುಂಡನಕ್ಕೆ ಒಳಗಾದ ತಲೆ. ಮುಖದಲ್ಲಿಯೂ ಕೂದಲುಗಳಿಲ್ಲ.
ಸನ್ಯಾಸಿಗಳ ಹೆಸರು ಕೇಳುವ ಅಗತ್ಯವಿಲ್ಲ. ಸುಮ್ಮನೆ ಸ್ವಾಮೀಜಿ ಎಂದು ಕರೆದರೆ ಸಾಕು. `ಸ್ವಲ್ಪ ಹೊತ್ತು ಹಾಡು ಕೇಳಲೇ ಸ್ವಾಮೀಜಿ?' ಎಂದೆ. Read more »
- 14 comments
- 3832 reads
Recent comments
37 weeks 2 days ago
38 weeks 2 days ago
44 weeks 20 hours ago
44 weeks 2 days ago
48 weeks 6 days ago
49 weeks 1 day ago
49 weeks 4 days ago
50 weeks 4 days ago
1 year 1 week ago
1 year 1 week ago