ನಾರಾಯಣ ಗುರುಗಳ ಪರಂಪರೆಯ ಗುರು ನಿತ್ಯಚೈತನ್ಯ ಯತಿಗಳು ಎಲ್ಲ ಧರ್ಮಗಳ ಬಗ್ಗೆಯೂ ಆಳವಾದ ಅರಿವಿದ್ದವರು. ದೇಹಕ್ಕೆ ಬಾಧಿಸುವ ರೋಗಗಳಿಗಿಂತಲೂ ಹೆಚ್ಚಾಗಿ ಮನುಷ್ಯನನ್ನು ಕಾಡುವುದು ಮನಸ್ಸಿಗೆ ಬಾಧಿಸುವ ಆಧ್ಯಾತ್ಮಿಕ ರೋಗಗಳು. ಈ ರೋಗಗಳನ್ನು ಪರಿಹರಿಸಿದ ಮಹಾವೈದ್ಯರಲ್ಲಿ ಯೇಸು ಕ್ರಿಸ್ತರೂ ಇದ್ದಾರೆಂಬುದು ಯತಿಗಳ ಅನಿಸಿಕೆ. ಅವರು ಈ ಬಗೆಯ ಅಪೂರ್ವ ವೈದ್ಯರ ಕುರಿತು ರಚಿಸಿರುವ ಗ್ರಂಥದಲ್ಲಿರುವ ಯೇಸುವಿನ ಕುರಿತ ಬರೆಹದ ಭಾವಾನುವಾದ ಇಲ್ಲಿದೆ.
ಗುರುಕುಲದಲ್ಲಿ ನನಗೊಬ್ಬ ಗೆಳೆಯನಿದ್ದಾನೆ. ಹೆಸರು ಜೋಸೆಫ್. ಆತ ಮಾಡುವ ಕೆಲಸ; ಕಳೆದ ಎರಡು ಸಾವಿರ ವರ್ಷಗಳಿಂದಲೂ ಉಳಿದುಕೊಂಡು ಬಂದಿರುವ ಬಡಗಿಯ ಕೆಲಸ. ನಾವಿಬ್ಬರು ಒಟ್ಟಿಗೆ ಕುಳಿತು ಮಾತನಾಡುವಾಗಲೆಲ್ಲಾ ನನ್ನನ್ನು ಬಹಳವಾಗಿ ಆಕರ್ಷಿಸುವುದು ಈ ಜೋಸೆಫ್‌ನ ಮಗ. ಅಪ್ಪನಿಂದ ಬರುವುದನ್ನೆಲ್ಲಾ ಈ ಮಗ ಪಡೆದುಕೊಂಡಿದ್ದ. ನಾನವನನ್ನು ಯೇಸು ಎಂದೇ ಕರೆಯುತ್ತಿದ್ದೆ. ಯೇಸು ಎಂಬ ಪದದ ಅರ್ಥ ಮತ್ತಾಯನು ಬರೆದ ಸುವಾರ್ತೆಯಲ್ಲಿ ಹೇಳಿರುವಂತೆ `ಜನಗಳನ್ನು ಪಾಪಗಳಿಂದ ಕಾಪಾಡುವವನು' ಎಂದಾಗಿದೆ. ಇಂದು ಮುಂಜಾನೆ ಗೆಳೆಯ ಜೋಸೆಫ್ ಜತೆ ಮಾತನಾಡಲು ತೊಡಗಿದಾಗ ವಾಗ್‌ರೂಪಿಯಾದ ಯೇಸುವನ್ನು ಕಂಡ ನಾನು ಕೇಳಿದೆ:
`ನೀನು ಹೇಗೆ ಜನರನ್ನು ಪಾಪಗಳಿಂದ ವಿಮೋಚಿಸುತ್ತೀಯಾ?'
ಆಗ ಯೇಸು ಪ್ರಶ್ನಿಸಿದ: `ಬೈಬಲ್‌ನ ಆದಿ ಕಾಂಡವನ್ನು ಓದಿದ್ದೀಯಾ?' ನಾನು ಹೌದೆಂದು ಗೋಣಾಡಿಸಿದೆ. ಸಂಭಾಷಣೆ ಮುಂದುವರಿಯಿತು.
ಯೇಸು: ಅದರಲ್ಲಿ ಹೇಳಲಾದ ಮೂರು ಆದಿಗಳು ಗೊತ್ತೇ?