
`ದೊಡ್ಡ ಮರವೊಂದು ಉರುಳುವಾಗ ಸುತ್ತಲಿನ ಭೂಮಿ ಅದುರುತ್ತದೆ’ ಸಾಮಾನ್ಯ ಸಂದರ್ಭದಲ್ಲಿ ಒಂದು ನಾಣ್ನುಡಿಯಷ್ಟೇ ಆಗಬಹುದಾಗಿದ್ದ ಈ ಹೇಳಿಕೆಗೆ ಕ್ರೌರ್ಯವನ್ನು ಲೇಪಿಸಿದ್ದು ಭಾರತದ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿ. ಇಂದಿರಾ ಹತ್ಯೆ ನಂತರ ದಿಲ್ಲಿಯಲ್ಲಿ ನಡೆದ ಸಿಕ್ಖರ ನರಮೇಧವನ್ನು ಸಮರ್ಥಿಸಿಕೊಳ್ಳಲು ರಾಜೀವ್ ಈ ನಾಣ್ನುಡಿ ಬಳಸಿಕೊಂಡಿದ್ದರು.
ಖ್ಯಾತ ಭೌತ ವಿಜ್ಞಾನಿ ಐಸಾಕ್ ನ್ಯೂಟನ್ ಪ್ರತಿಪಾದಿಸಿದ ಬಲ ವಿಜ್ಞಾನದ ಸಿದ್ಧಾಂತಗಳಲ್ಲಿ ಮೂರನೆಯದ್ದು `ಪ್ರತಿಯೊಂದು ಕ್ರಿಯೆಗೂ ಒಂದು ಸಮಾನ ಮತ್ತು ವಿರುದ್ಧ ದಿಕ್ಕಿನ ಪ್ರತಿಕ್ರಿಯೆ ಇರುತ್ತದೆ’. ಭೌತಶಾಸ್ತ್ರದ ಈ ಮಹತ್ವದ ಹೇಳಿಕೆ ಗುಜರಾತ್‌ನ ಮುಖ್ಯಮಂತ್ರಿ ನರೇಂದ್ರ ಮೋದಿಯವರಿಗೆ ಗೋಧ್ರಾ ನಂತರದ ನರಮೇಧವನ್ನು ಸಮರ್ಥಿಸಿಕೊಳ್ಳುವ ಹೇಳಿಕೆಯಾಗಿಬಿಟ್ಟಿತು.ಬಲ ವಿಜ್ಞಾನದ ಇತಿಹಾಸದಲ್ಲಿ ಮಹತ್ತರವಾದ ಸ್ಥಾನವನ್ನು ಪಡೆದಿದ್ದ ಈ ಹೇಳಿಕೆ ಭಾರತದ ರಾಜಕೀಯ ಇತಿಹಾಸದಲ್ಲಿ ಒಂದು ಕ್ರೌರ್ಯಕ್ಕೆ ಸಂವಾದಿಯಾಗಿಬಿಟ್ಟಿತು.