ಎರಡು ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್ ಹಜ್ ಸಬ್ಸಿಡಿಯನ್ನು ಮುಂದಿನ ಹತ್ತು ವರ್ಷಗಳಲ್ಲಿ ಸಂಪೂರ್ಣವಾಗಿ ಇಲ್ಲವಾಗಿಸಬೇಕೆಂದು ಸಂದರ್ಭದಲ್ಲಿ ನಾನು ಬರೆದ ಲೇಖನ ಇಲ್ಲಿದೆ. ಇದು ಪ್ರಜಾವಾಣಿಯ ಅಂತರಾಳ ಪುಟದಲ್ಲಿ ಪ್ರಕಟವಾಗಿತ್ತು. ಇದೇ ಸೋಮವಾರ (23 ಜೂನ್ 2014) ವಾರ್ಷಿಕ ಹಜ್ ಸಮ್ಮೇಳನದಲ್ಲಿ ಸುಷ್ಮಾ ಸ್ವರಾಜ್ ಅವರು ‘ಸುಂದರವಾದ ಉರ್ದುವಿನಲ್ಲಿ’ ಆಡಿದ ಮಾತುಗಳ ವರದಿ ಓದಿದ ಮೇಲೆ ಈ ಲೇಖನವನ್ನು ಮತ್ತೆ ಪ್ರಕಟಿಸಬಹುದು ಅನ್ನಿಸಿತು. ಆರ್ಥಿಕ ಉದಾರೀಕರಣದ ಯುಗ ಆರಂಭವಾದ ನಂತರದ ಕಾಲಘಟ್ಟದಲ್ಲಿ ಯಾವ ಸಬ್ಸಿಡಿಯನ್ನು ಹಿಂತೆಗೆದುಕೊಳ್ಳುವ ಪ್ರಸ್ತಾವಕ್ಕೂ ಸಿಗದೇ…