Freedom of the present | ಈ ನಡುವಿನ ಬಿಡುವು

Menu
  • Privacy Policy
Menu

Author: admin

ದೇಶ ಸ್ಫೋಟಿಸುವಾಗ ಸೂಟ್‌ ಬದಲಾಯಿಸಿದವರು!

Posted on September 16, 2008May 24, 2015 by admin

`ರೋಮ್‌ ಹೊತ್ತಿ ಉರಿಯುತ್ತಿದ್ದಾಗ ದೊರೆ ನೀರೋ ಪಿಟೀಲು ನುಡಿಸುತ್ತಿದ್ದ’ ಸಂಗತಿ ನಮಗೆಲ್ಲಾ ಗೊತ್ತಿದೆ. ನೀರೋ ಪಿಟೀಲು ನುಡಿಸುತ್ತಿದ್ದನೇ ಇಲ್ಲವೇ ಎಂಬುದರ ಬಗ್ಗೆ ಅನೇಕ ಚರ್ಚೆಗಳಿವೆ. ಕಾರಣ ಆಗ ಪಿಟೀಲು ಎಂಬ ವಾದ್ಯವೇ ಇರಲಿಲ್ಲ. ನಮ್ಮ ಈಗಿನ ಗಿಟಾರ್‌ನ ಮೂಲ ರೂಪವಾಗಿದ್ದ Lyre  ವಾದ್ಯವನ್ನು ನೀರೋ ನುಡಿಸುತ್ತಿದ್ದ ಎಂದು ರೋಮಿನ ಇತಿಹಾಸಕಾರರಲ್ಲಿ ಒಬ್ಬನಾಗಿರುವ ಕ್ಯಾಸಿಯಸ್‌ ಹೇಳಿದ್ದಾನೆ. ನೀರೋ ಪಿಟೀಲು ನುಡಿಸುತ್ತಿದ್ದನೇ ಇಲ್ಲವೇ ಎಂಬುದರಷ್ಟೇ ಮುಖ್ಯವಾದ ಮತ್ತೊಂದು ಪ್ರಶ್ನೆ ರೋಮ್‌ಗೆ ಬೆಂಕಿ ಹತ್ತಿಕೊಂಡದ್ದು ಹೇಗೆ ಎಂಬುದು? ಇದಕ್ಕೆ ಸಂಬಂಧಿಸಿದಂತೆ ಹಲವು ಅಭಿಪ್ರಾಯಗಳಿವೆ. ಕೆಲವರು ಇದನ್ನು ಒಂದು ಆಕಸ್ಮಿಕ ಎಂದು ಹೇಳಿದ್ದಾರೆ. ಇನ್ನು ಕೆಲವರು ಕ್ರೈಸ್ತರು ಬೆಂಕಿ ಹಚ್ಚಿದರು ಎನ್ನುತ್ತಾರೆ. ನೀರೋನ ಕಾಲದ ದಾಖಲೆಗಳನ್ನು ಇಟ್ಟುಕೊಂಡು ಈ ಬೆಂಕಿಗೂ ನೀರೋನೇ ಕಾರಣನಾಗಿದ್ದನೆಂದು ಕ್ಯಾಸಿಯಸ್‌ನಂಥ ಇತಿಹಾಸಕಾರರು ಅಭಿಪ್ರಾಯಪಡುತ್ತಾರೆ.

ನೀರೋ ಕಾಲದಲ್ಲಿ ಮನೆಗಳನ್ನು ಮರದಿಂದ ನಿರ್ಮಿಸಲಾಗುತ್ತಿತ್ತು. ಗೋಡೆಗಳೂ ಮರದದಿಂದಲೇ ರೂಪುಗೊಳ್ಳುತ್ತಿದ್ದವು. ಕ್ಯಾಸಿಯಸ್‌ ದಾಖಲಿಸಿರುವಂತೆ `ನಗರವನ್ನು ನಾಶಮಾಡುವ ಅಭೀಪ್ಸೆಯಿಂದ ಉತ್ತೇಜಿತನಾದ ನೀರೋ ಕುಡುಕರಂತೆ ನಟಿಸಿ ನಗರಕ್ಕೆ ಕೊಳ್ಳಿ ಇಡಲು ಜನರನ್ನು ಕಳುಹಿಸಿದ. ಪಾಲಾಟೈನ್‌ ಬೆಟ್ಟದ ಮೇಲಿದ್ದ ತನ್ನ ಅರಮನೆಯಲ್ಲಿ ಉರಿಯುವ ರೋಮ್‌ ಅನ್ನು ನೋಡುತ್ತಾ ನೀರೋ Lyre  ನುಡಿಸುತ್ತಾ ಹಾಡಿದ’.

Read more

ಭಯೋತ್ಪಾದನೆಯ ಮತ್ತೊಂದು ಮುಖ

Posted on September 7, 2008May 24, 2015 by admin

ಇತ್ತೀಚೆಗೆ ಬೆಂಗಳೂರು, ಅಹಮದಾಬಾದ್‌ಗಳಲ್ಲಿ ಸರಣಿ ಸ್ಫೋಟಗಳು ಸಂಭವಿಸಿದಾಗ ಅದಕ್ಕೆ ಸಂಬಂಧಿಸಿದಂತೆ ಬಂದ ಎರಡು ಮುಖ್ಯ ಪ್ರತಿಕ್ರಿಯೆಗಳ ಬಗ್ಗೆ ಹೆಚ್ಚಿನ ಚರ್ಚೆ ನಡೆಯಲಿಲ್ಲ. ಮೊದಲನೆಯದ್ದು ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್‌ ಅವರದ್ದು. ಸ್ಫೋಟಗಳೆಲ್ಲವೂ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೇ ನಡೆಯುತ್ತಿದೆ. ಸಂಸತ್‌ನಲ್ಲಿ ನಡೆದ ವೋಟಿಗಾಗಿ ನೋಟು ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕಾಂಗ್ರೆಸ್‌ ಈ ಸ್ಫೋಟಗಳನ್ನು ಸಂಘಟಸಿದ್ದಿರಬೇಕು ಎಂಬ ಅರ್ಥದಲ್ಲಿ ಅವರು ಮಾತನಾಡಿದ್ದರು. ಈ ಪ್ರತಿಕ್ರಿಯೆ ಹೊರಬಿದ್ದ ದಿನವೇ ಸಫ್ದರ್‌ ಹಷ್ಮಿ ಮೆಮೋರಿಯಲ್‌ ಟ್ರಸ್ಟ್‌ನ ಶಬ್ನಂ ಹಶ್ಮಿ `ಪ್ರಭುತ್ವ ತನ್ನ ಉಳಿದೆಲ್ಲಾ ಸೇವೆಗಳನ್ನೂ ಖಾಸಗೀಕರಿಸಿರುವುದರಿಂದ ಅದಕ್ಕೆ ಉಳಿದಿರುವುದು ಭದ್ರತೆಯ ಕೆಲಸ ಮಾತ್ರ. ಇದನ್ನು ಜನರಿಗೆ ಆಗಾಗ ನೆನಪು ಮಾಡಿ ಕೊಡದೇ ಹೋದರೆ ಪ್ರಭುತ್ವವೇ ಅಪ್ರಸ್ತುತವಾಗಿಬಿಡುವ ಸಾಧ್ಯತೆ ಇದೆ. ಸರಣಿ ಸ್ಫೋಟಗಳನ್ನು ಈ ಹಿನ್ನೆಲೆಯಲ್ಲೂ ಅರ್ಥ ಮಾಡಿಕೊಳ್ಳಬೇಕಾದ ಅಗತ್ಯವಿದೆ’ ಎಂದಿದ್ದರು.

ನಗರ ಮಧ್ಯೆ ದೊಡ್ಡ ಪಟಾಕಿ ಸಿಡಿದರೂ ಅದರ ಹಿಂದೆ ಇಸ್ಲಾಮಿಕ್‌ ಭಯೋತ್ಪಾದನೆಯಿದೆ ಎಂದು ಹೇಳುವುದು ಬಿಜೆಪಿಗೆ ಅಭ್ಯಾಸವಾಗಿ ಹೋಗಿದೆ. ಅಂತಹ ಪಕ್ಷದ ಪ್ರಮುಖ ನಾಯಕಿಯೊಬ್ಬರು ಬಾಂಬ್‌ ಸ್ಫೋಟದ ಹಿಂದೆ ಮತ್ತೊಂದು ರಾಜಕೀಯ ಪಕ್ಷದ ಕೈವಾಡದ ಬಗ್ಗೆ ಆರೋಪಿಸಿದ್ದು ಸ್ವಲ್ಪ ಮಟ್ಟಿಗೆ ವಿಚಿತ್ರವಾಗಿಯೂ ವಿಶಿಷ್ಟವಾಗಿಯೂ ಇದೆ. ಅಷ್ಟೇ ಅಲ್ಲ ಅವರು ಸ್ಫೋಟಗಳನ್ನು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷವೇ ಮಾಡಿಸಲು ಕಾರಣವಾದ ಅಂಶದ ಬಗ್ಗೆಯೂ ಹೇಳಿದ್ದರು. ಆದರೆ ಅದನ್ನು ಸ್ವತಃ ಬಿಜೆಪಿ ಸೇರಿದಂತೆ ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ. ಮಾಧ್ಯಮಗಳೂ ಅಷ್ಟೇ. `ಸ್ಫೋಟಗಳ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಪಾಲಿಸಬೇಕಾದ ನೀತಿ ಸಂಹಿತೆ’ಯ ಬಗ್ಗೆಯಷ್ಟೇ ಮಾತನಾಡಿ ಸುಮ್ಮನಾಗಿಬಿಟ್ಟವು.

Read more

ಢಿಫ್ರೆಂಟ್ ಸಿನಿಮಾ ಮತ್ತು ಡಿಫ್ರೆಂಟ್ ಸರಕಾರ

Posted on September 1, 2008May 24, 2015 by admin

`ನೋಡಿ ಸಾರ್‌, ನಮ್ಮದು ಕಂಪ್ಲೀಟ್‌ ಡಿಫ್ರೆಂಟ್‌ ಸಿನಿಮಾ ಸಾರ್‌. ನಾವು ಇಡೀ ಕತೆಯನ್ನು ಡಿಫ್ರೆಂಟ್‌ ಆಗಿ ಪ್ರೆಸೆಂಟ್‌ ಮಾಡಿದ್ದೀವಿ. ತುಂಬಾನೆ ಡಿಫ್ರೆಂಟ್‌ ಕತೆ. ….ಅವ್ರ ಅಭಿಮಾನಿಗಳು ಎಂಜಾಯ್ ಮಾಡ್ತಾರೆ. ಯಂಗ್‌ಸ್ಟರ್ಸ್‌ಗೆ ಇಷ್ಟ ಆಗುತ್ತೆ. ಲೇಡೀಸ್‌ಗೂ ಇಷ್ಟ ಆಗುತ್ತೆ ಸಾರ್‌. ನೀವು ನೋಡ್ತಾ ಇರಿ ಸಾರ್‌. ಗ್ಯಾರಂಟಿ ಹಂಡ್ರೆಡ್‌ ಡೇಸ್‌.’

`ನಮ್ಮ ಪಕ್ಷ ಭಿನ್ನವಾದುದು. ಸಿದ್ಧಾಂತಗಳಿಗೆ ಬದ್ಧವಾದುದು. ಕಾಂಗ್ರೆಸ್ಸಿನ ಭ್ರಷ್ಟಾಚಾರ, ಜೆಡಿಎಸ್‌ನ ವಚನಭ್ರಷ್ಟತೆ ಸಂಸ್ಕೃತಿ ನಮ್ಮದಲ್ಲ. ನಮ್ಮದು ರಾಷ್ಟ್ರೀಯವಾದಿ ಪಕ್ಷ. ನಾವು ಅಧಿಕಾರಕ್ಕೆ ಬಂದರೆ ಖಂಡಿತವಾಗಿಯೂ ಪೂರ್ಣ ಅವಧಿಗೆ ಸ್ಥಿರ ಸರಕಾರವನ್ನು ನೀಡುತ್ತೇವೆ. ರೈತರಿಗೆ ಉಚಿತ ವಿದ್ಯುತ್‌ ನೀಡುತ್ತೇವೆ. ವಿದ್ಯುತ್‌ ಬಾಕಿಯನ್ನು ಮನ್ನಾ ಮಾಡುತ್ತೇವೆ. ಬಡತನ ರೇಖೆಗೆ ನಿಗದಿ ಪಡಿಸಿರುವ ಆದಾಯದ ಮಿತಿಯನ್ನು 11,800ರಿಂದ 30,000 ರೂಪಾಯಿಗಳಿಗೆ ಏರಿಸುತ್ತೇವೆ. ಕರ್ನಾಟಕದ ಎಲ್ಲ ಸಮಸ್ಯೆಗಳಿಗೂ ಬಿಜೆಪಿಯೇ ಪರಿಹಾರ’

ಮೇಲಿನ ಎರಡೂ ಹೇಳಿಕೆಗಳ ಮಧ್ಯೆ ಏನಾದರೂ ವ್ಯತ್ಯಾಸವಿದೆಯೇ? ಗಾಂಧಿನಗರಿಗರು ಹೇಳುವ ಕಂಪ್ಲೀಟ್‌ ಡಿಫ್ರೆಂಟ್‌ ಸಿನಿಮಾ ಎಂಬುದು ತಮಿಳಿನಿಂದಲೋ ತೆಲುಗಿನಿಂದಲೋ ಕದ್ದ ಸರಕನ್ನಷ್ಟೇ ಹೊಂದಿರುತ್ತದೆ. ಇದನ್ನು ಯಾರಾದರೂ ಪ್ರಶ್ನಿಸಿದರೆ ತಕ್ಷಣ ಗಾಂಧಿನಗರ ಉತ್ತರ ಕೊಡುತ್ತದೆ. `ಜಗತ್ತಿನಲ್ಲಿ ಇರುವುದೇ ಒಂಬತ್ತು ಕತೆಗಳು. ಅದನ್ನೇ ಡಿಫ್ರೆಂಟ್‌ ಆಗಿ ಹೇಳುವುದಷ್ಟೇ ನಮ್ಮ ಕೆಲಸ. ಹೊಸ ಕತೆ ಎಂಬುದೊಂದಿಲ್ಲ.’

Read more

ಮಳೆಯ ತಾರದ ಗುಡುಗು ಸಿಡಿಲು

Posted on August 12, 2008May 24, 2015 by admin
ಎನ್ ಸಂತೋಷ್ ಹೆಗ್ಡೆ/ Snathosh Hegde
ಮಂತ್ರಿಗಳು ಆಗೀಗ ಅಧಿಕಾರಿಗಳ ಬಗ್ಗೆ ಕಿಡಿಕಾರುವುದುಂಟು. ಸರಕಾರ ರೂಪಿಸಿರುವ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ಯದೇ ಇದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆಂದು ಗುಡುಗುವುದು ಮಾಧ್ಯಮಗಳಲ್ಲೂ ಸುದ್ದಿಯಾಗುತ್ತದೆ. ಈ ಗುಡುಗು ಸಿಡಿಲುಗಳೆಲ್ಲವೂ ಮಳೆಯಾಗದೆ ಮುಗಿದು ಹೋಗುವುದು ನಮ್ಮ ನಿತ್ಯದ ಜಂಜಡಗಳಲ್ಲಿ ಮರೆತೂ ಹೋಗುತ್ತವೆ. ಮಂತ್ರಿ ಮಹೋದಯರ ಈ ಗುಡುಗಾಟಕ್ಕೆ ಮಳೆ ತರಿಸುವ ಶಕ್ತಿಯೇ ಇಲ್ಲ ಎಂಬುದು ವಾಸ್ತವ. ಲೋಕಾಯುಕ್ತ ಸಂಸ್ಥೆಯನ್ನು ನಮ್ಮ ಸರಕಾರಗಳು ನಡೆಸಿಕೊಳ್ಳುತ್ತಿರುವುದನ್ನು ನೋಡಿದರೆ ಎಲ್ಲವೂ ಅರ್ಥವಾಗುತ್ತದೆ.

Read more

ಮಂತ್ರಿಗಳೆಂಬ ಅಭಿನವ ಫರೋಅಗಳು

Posted on August 8, 2008May 24, 2015 by admin

ಇರಾನ್‌ನ ಖ್ಯಾತ ಚಿಂತಕ ಅಲೀ ಶರೀಅತಿ ಅವರು ತಮ್ಮ ಲೇಖನವೊಂದರಲ್ಲಿ ಈಜಿಪ್ಟ್‌ನ ಪಿರಾಮಿಡ್‌ಗಳನ್ನು ನೋಡಿದ ಅನುಭವವನ್ನು ಬರೆದಿದ್ದಾರೆ. ಪಿರಾಮಿಡ್‌ಗಳೆಂಬ ಅದ್ಭುತಗಳ ಬಗ್ಗೆ ಅಲ್ಲಿನ ಮಾರ್ಗದರ್ಶಿಯ ಮಾತುಗಳನ್ನು ತಮ್ಮದೇ ಶೈಲಿಯಲ್ಲಿ ದಾಖಲಿಸುತ್ತಾ ಹೋಗುವ ಅವರು ಪಿರಾಮಿಡ್‌ ನಿರ್ಮಾಣದ ಹಿಂದಿನ ಕ್ರೌರ್ಯವನ್ನು ವಿವರಿಸುತ್ತಾರೆ. ಕೈರೋದಲ್ಲಿರುವ ಆರು ದೊಡ್ಡ ಮತ್ತು ಮೂರು ಸಣ್ಣ ಪಿರಾಮಿಡ್‌ಗಳ ನಿರ್ಮಾಣಕ್ಕೆ ಬಳಕೆಯಾದದ್ದು ಸುಮಾರು ಎಂಟುನೂರು ದಶ ಲಕ್ಷ ಬೃಹತ್‌ ಗಾತ್ರದ ಕಲ್ಲುಗಳು. ಪಿರಾಮಿಡ್‌ಗಳನ್ನು ನಿರ್ಮಿಸಿದ ಸ್ಥಳದಿಂದ ಸುಮಾರು 980 ಮೈಲುಗಳ ದೂರದಿಂದ ಈ ಕಲ್ಲುಗಳನ್ನು ತರಲಾಯಿತು. ಪ್ರತಿಯೊಂದು ಕಲ್ಲು ಒಂದೂವರೆಯಿಂದ ಎರಡು ಟನ್‌ಗಳಷ್ಟು ಭಾರವಿದೆ. ಈಗಿನಂತೆ ಕಲ್ಲುಗಳನ್ನು ಎತ್ತಿಡಲು ಕ್ರೇನುಗಳಾಗಲೀ, ಸಾಗಿಸಲು ಯಾಂತ್ರೀಕೃತ ಟ್ರಕ್‌ಗಳಾಗಲೀ ಇಲ್ಲದ ಆ ದಿನಗಳಲ್ಲಿ ಗುಲಾಮರನ್ನು ಬಳಸಿಕೊಂಡೇ ಇವೆಲ್ಲವನ್ನೂ ಮಾಡಲಾಯಿತು.

ಕಲ್ಲುಗಳನ್ನು ತರುವ ಕೆಲಸದಲ್ಲೇ ಎಷ್ಟೋ ಮಂದಿ ಕಲ್ಲುಗಳಡಿಗೆ ಸಿಕ್ಕಿ ಮೃತಪಟ್ಟರು. ಕಲ್ಲುಗಳನ್ನು ಎತ್ತಿ ಇಟ್ಟು ಪಿರಾಮಿಡ್‌ ನಿರ್ಮಿಸುವ ಕ್ರಿಯೆಯಲ್ಲಿ ಸತ್ತವರು ಅದೆಷ್ಟು ಮಂದಿಯೋ. ಅವರನ್ನೆಲ್ಲಾ ಪಿರಾಮಿಡ್‌ಗಳ ಪಕ್ಕದಲ್ಲೇ ಇರುವ ಸಾಮೂಹಿಕ ಸಮಾಧಿಯಲ್ಲಿ ಹೂಳಲಾಯಿತು. ಪಿರಾಮಿಡ್‌ನ ಒಳಗಿರುವ ಮೃತ ಫರೋಅನ ಸೇವೆಗೆಂದು ಅವರನ್ನು ಪಿರಾಮಿಡ್‌ನ ಪಕ್ಕದಲ್ಲಿಯೇ ಸಮಾಧಿ ಮಾಡಲಾಯಿತಂತೆ. ಸತ್ತ ಮೇಲೂ ಅವರು ಜೀತ ವಿಮುಕ್ತರಾಗಲಿಲ್ಲ!

Read more

‘ಮುಂಡನ ಮಾಡಿಸಿಕೊಂಡ ಬದುಕು’

Posted on July 30, 2008May 24, 2015 by admin

ಯುಪಿಎ ಸರಕಾರ ವಿಶ್ವಾಸ ಮತ ಯಾಚಿಸಲು ಕರೆದಿದ್ದ ಅಧಿವೇಶನದ ಎರಡನೆಯ ದಿನ ಮತದಾನ ನಡೆಯುವ ಸ್ವಲ್ಪ ಹೊತ್ತಿಗೆ ಮೊದಲು ಮೂವರು ಬಿಜೆಪಿ ಸಂಸದರು ನೋಟಿನ ಕಟ್ಟುಗಳನ್ನು ಲೋಕಸಭೆಯಲ್ಲಿ ಪ್ರದರ್ಶಿಸಿದರು. ಮತದಾನದಲ್ಲಿ ಪಾಲ್ಗೊಳ್ಳದಂತೆ ತಡೆಯಲು ಈ ಹಣದ ಆಮಿಷವನ್ನೊಡ್ಡಲಾಗಿತ್ತು ಎಂದು ಆರೋಪಿಸಿದರು. ದೇಶದ ಮೂಲೆ ಮೂಲೆಗಳಲ್ಲಿರುವವರೆಲ್ಲಾ ಟಿ.ವಿ.ಯಲ್ಲಿ ಈ ದೃಶ್ಯವನ್ನು ಕಂಡರು. ಸ್ಪೀಕರ್‌ ಸೋಮನಾಥ ಚಟರ್ಜಿ ಈ ಸಂಗತಿಯ ಕುರಿತ ತನಿಖೆಯ ಭರವಸೆಯನ್ನೂ ನೀಡಿದರು. ಯುಪಿಎ ವಿಶ್ವಾಸ ಮತವನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾಯಿತು.

ಈ ಎಲ್ಲಾ ಘಟನಾವಳಿಗಳ ನಂತರ ಎಲ್ಲಾ ಪಕ್ಷಗಳ ಮುಖಂಡರಂತೆ ಸಿಪಿಐ (ಎಂ)ನ ಕಾರ್ಯದರ್ಶಿ ಪ್ರಕಾಶ್‌ ಕಾರಟ್‌ ಕೂಡಾ ಮಾಧ್ಯಮಗಳ ಜತೆ ಮಾತನಾಡಿದರು. ಅವರು ಹೇಳಿದ ಒಂದು ಮಾತು ಹೀಗೆ `ನಮ್ಮ ಮಿತ್ರ ಪಕ್ಷಗಳ ಹಲವು ಸದಸ್ಯರಿಗೆ ಲಂಚದ ಆಮಿಷವನ್ನೊಡ್ಡಲಾಗಿತ್ತು. ಆದರೆ ನಮ್ಮ ಪಕ್ಷದ ಸದಸ್ಯರಿಗೆ ಮಾತ್ರ ಇಂಥ ಆಮಿಷಗಳಿರಲಿಲ್ಲ. ಕಾರಣ ನಮ್ಮ ಪಕ್ಷದ ಸದಸ್ಯರನ್ನು ಖರೀದಿಸಲು ಸಾಧ್ಯವಿಲ್ಲ ಎಂಬುದು ಅವರಿಗೂ ಗೊತ್ತಿತ್ತು’. ಈ ಹೇಳಿಕೆಯನ್ನು ಅಹಂಕಾರದ ಹೇಳಿಕೆ ಎಂದು ಕೇಡರ್‌ಗಳಿಲ್ಲದ ಪಕ್ಷದ ನಾಯಕರು ಹೇಳಬಹುದಾದರೂ ಇದು ವಾಸ್ತವ ಎಂಬುದರಲ್ಲಿ ಎರಡು ಮಾತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಇಂಥ ಬದ್ಧತೆಗಳು ಅಗತ್ಯ ಎಂಬುದರಲ್ಲಿಯೂ ಸಂಶಯವಿಲ್ಲ. ತನ್ನ ಸದಸ್ಯರನ್ನು ಯಾರೂ ಖರೀದಿಸಲು ಸಾಧ್ಯವಿಲ್ಲ ಎಂಬ ನಂಬಿಕೆ ಇರುವ ಪಕ್ಷವೊಂದು ತನ್ನ ಹಿರಿಯ ಸದಸ್ಯನೊಬ್ಬ ಅಂತಃಸ್ಸಾಕ್ಷಿಗೂ, ದೇಶದ ಸಂವಿಧಾನಕ್ಕೂ ಬದ್ಧತೆಯನ್ನು ತೋರಿಸಿದಾಗ ಏಕೆ ಸಹಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂಬುದು ಮಾತ್ರ ಆಶ್ಚರ್ಯದ ವಿಷಯ.

Read more

ಅಣುಶಕ್ತಿ: ರಾಜಕಾರಣಿಗಳು ಕೇಳದ ಪ್ರಶ್ನೆಗಳು

Posted on July 30, 2008May 24, 2015 by admin

ಭಾರತ ಮತ್ತು ಅಮೆರಿಕದ ನಡುವಣ ಅಣು ಒಪ್ಪಂದ ದೇಶದ ವಿದ್ಯು್ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಿಬಿಡುತ್ತದೆ. ಇದು ದೇಶಕ್ಕೆ ಒಳ್ಳೆಯದೆಂದು ಕಾಂಗ್ರೆ್ ಹೇಳುತ್ತಿದೆ. ಈ `ಒಳಿತಿನ’ ನಂಬಿಕೆಯನ್ನಿಟ್ಟುಕೊಂಡು ಅದು ಸಂಸತ್ತಿನಲ್ಲಿ ವಿಶ್ವಾಸ ಮತ ಕೋರುತ್ತಿದೆ. ಭಾರತ ಮತ್ತು ಅಮೆರಿಕದ ನಡುವಣ ನಾಗರಿಕ ಅಣು ಒಪ್ಪಂದವನ್ನು ವಿರೋಧಿಸುತ್ತಿರುವ ಬಿಜೆಪಿ ಮತ್ತು ಎಡ ಪಕ್ಷಗಳೆರಡೂ ಅಣು ವಿದ್ಯುತ್ ನ ಒಳಿತನ್ನು ಅಲ್ಲಗಳೆಯುತ್ತಿಲ್ಲ. ಬಿಜೆಪಿಯಂತೂ ಅಮೆರಿಕದ ಜತೆಗೆ ಭಾರತ ವ್ಯೂಹಾತ್ಮಕ ಸಂಬಂಧವನ್ನು ಇಟ್ಟುಕೊಳ್ಳಬೇಕೆಂದೂ ವಾದಿಸುತ್ತಿದೆ. ಆದರೆ ಈ ಎರಡೂ ಪಕ್ಷಗಳು ಅಣು ಒಪ್ಪಂದವನ್ನು ವಿರೋಧಿಸುತ್ತಿವೆ. ಅವುಗಳು ನೀಡುವ ಕಾರಣ ಈ ಒಪ್ಪಂದ ಭಾರತದ ಸಾರ್ವಭೌಮತೆಯನ್ನು ಕಿತ್ತುಕೊಳ್ಳುವಂತಿದೆ. ಮಾತ್ರವ ಭಾರತವನ್ನು ಅಮೆರಿಕದ ಕಿರಿಯ ಪಾಲುದಾರನಾಗಿಸುವಂಥ ಒಪ್ಪಂದವಿದು.

ಸಂಸತ್ತಿನಲ್ಲಿ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ಎಲ್ ಕೆ ಆಡ್ವಾಣಿಯವರಂತೂ ಅಣು ಒಪ್ಪಂದದ ಸುತ್ತ ಇರುವ ನಿಗೂಢತೆಯ ಬಗ್ಗೆ ಮಾತನಾಡಿದರು. ಒಪ್ಪಂದದ ಕರಡು, ಐಎಇಎ ಜತೆಗಿನ ಒಪ್ಪಂದ ಕರಡುಗಳನ್ನು ರಹಸ್ಯವಾಗಿಟ್ಟಿರುವುದನ್ನು ಪ್ರಶ್ನಿಸಿದರು. ಎಡ ಪಕ್ಷಗಳಂತೂ ಒಪ್ಪಂದದ ರಹಸ್ಯಾತ್ಮಕತೆಯ ಬಗ್ಗೆ ಆರಂಭದಿಂದಲೂ ಪ್ರಶ್ನೆಗಳನ್ನು ಎತ್ತುತ್ತಲೇ ಇವೆ. ಇದೇನು ಯುಪಿಎ ಸರಕಾರ ವಿಶೇಷವಾಗಿ ರೂಢಿಸಿಕೊಂಡ ರಹಸ್ಯಾತ್ಮಕತೆಯಲ್ಲ. ಅಣುಶಕ್ತಿಗೆ ಸಂಬಂಧಿಸಿದ ಎಲ್ಲವೂ ಭಾರತದಲ್ಲಿ ರಹಸ್ಯವೇ. ಇದಕ್ಕೆ ಅಗತ್ಯವಿರುವ ಕಾನೂನುಗಳನ್ನೂ ನಮ್ಮ ಸಂಸದರೇ ರೂಪಿಸಿ ಜಾರಿಗೆ ತಂದಿದ್ದಾರೆ.

ಈಗ ಅಣು ಒಪ್ಪಂದವನ್ನು ವಿರೋಧಿಸುತ್ತಿರುವ ಎಡ ಮತ್ತು ಬಲ ಪಕ್ಷಗಳಿಗೆ ಒಪ್ಪಂದದ ಕರಡುಗಳನ್ನು `ಕ್ಲಾಸಿಫೈಡ್’ ಎಂದು ಕರೆಯುತ್ತಿರುವುದು ಮಾತ್ರ ಒಂದು ಸಮಸ್ಯೆಯಂತೆ ತೋರುತ್ತಿದೆಯೇ ಹೊರತು ಅಣುಶಕ್ತಿಗೆ ಸಂಬಂಧಿಸಿದ ಖರ್ಚು ವೆಚ್ಚಗಳ ಬಗ್ಗೆ, ಅಣುಶಕ್ತಿ ರಿಯಾಕ್ಟರುಗಳ ಕಾರ್ಯನಿರ್ವಹಣೆಯ ಬಗ್ಗೆ, ವಿಕಿರಣ ಸೋರಿಕೆಗಳ ಬಗ್ಗೆ ಇಲ್ಲಿಯ ತನಕವೂ ಸಂಸತ್ತಿನಲ್ಲಿ ಚರ್ಚೆ ನಡೆದಿಲ್ಲ. ಮಾಧ್ಯಮಗಳು ಈ ವಿಷಯವನ್ನು ಕೆದಕಿದಾಗಲೆಲ್ಲಾ ಅಧಿಕೃತ ರಹಸ್ಯ ಕಾಯ್ದೆಯ ಬೆಂಬಲ ಪಡೆದು ಎಲ್ಲವನ್ನೂ ಮುಚ್ಚಿಡಲಾಗುತ್ತದೆ. ಅಣು ಒಪ್ಪಂದದ ಕುರಿತ ಬಿಸಿಯೇರಿದ ಚರ್ಚೆಗಳಲ್ಲಿ ಈ ವಿಷಯವನ್ನು ಯಾರೂ ಪ್ರಸ್ತಾಪಿಸಲಿಲ್ಲ.

Read more

ಓಟು ಹಾಕದಿರುವುದೂ ಪ್ರಜಾಪ್ರಭುತ್ವ!

Posted on May 17, 2008May 24, 2015 by admin

<p>
ಚುನಾವಣೆಗಳು ಹತ್ತಿರ ಬಂದಾಗಲೆಲ್ಲಾ ಮತದಾನ ಎಷ್ಟು ಮುಖ್ಯ ಎಂಬುದರ ಕುರಿತ ಪ್ರಚಾರ ಆರಂಭವಾಗುತ್ತದೆ. ಒಂದೇ ಒಂದು ಓಟು ಯಾವ ಬದಲಾವಣೆಯನ್ನು ತರಬಲ್ಲದು ಎಂಬುದರ ಬಗ್ಗೆ ಮಾಧ್ಯಮಗಳು ಹೇಳುತ್ತವೆ. ಮತದಾನದ ದಿನವಿಡೀ ಮಾಧ್ಯಮಗಳು ಮತದಾನದ ಪ್ರಮಾಣದ ಮೇಲೆ ಕಣ್ಣಿರಿಸಿ ಚರ್ಚೆಗಳನ್ನು ನಡೆಸುತ್ತವೆ. ನಿರ್ದಿಷ್ಟ ಪ್ರದೇಶದಲ್ಲಿ ಏಕೆ ಮತದಾನ ಕಡಿಮೆಯಾಯಿತು ಎಂಬುದರ ಬಗ್ಗೆ ಕೂದಲು ಸೀಳುವ ಕೆಲಸವೂ ನಡೆಯುತ್ತದೆ.
</p>
<p>
ಭಾರತದ ಚುನಾವಣೆಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಒಂದು ವಿದ್ಯಮಾನವೆಂದರೆ ನಗರ ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದ ಮತದಾನ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದ ಮತದಾನ. ನಗರಗಳಲ್ಲಿರುವವರಲ್ಲಿ ಹೆಚ್ಚಿನವರು ಮಧ್ಯಮವರ್ಗದವರು, ಸುಶಿಕ್ಷಿತರು. ಗ್ರಾಮೀಣ ಪ್ರದೇಶಗಳಲ್ಲಿರುವವರ ಶಿಕ್ಷಣದ ಮಟ್ಟ ಕಡಿಮೆ. ಮಧ್ಯಮ ವರ್ಗದವರ ಸಂಖ್ಯೆಯೂ ಕಡಿಮೆ. ಮಧ್ಯಮ ವರ್ಗ ಭ್ರಷ್ಟಾಚಾರದ ಬಗ್ಗೆ ಕಿಡಿಕಾರುತ್ತದೆ. ರಾಜಕಾರಣಿಗಳನ್ನು ಟೀಕಿಸುತ್ತದೆ. ರಾಜಕಾರಣಿಗಳನ್ನು ಆರಿಸುವ ಪ್ರಕ್ರಿಯೆಯಲ್ಲಿ ಅದು ಪಾಲ್ಗೊಳ್ಳುವುದಿಲ್ಲ. ಮತದಾನದ ದಿನ ಸಿಗುವ ರಜೆಯನ್ನು ಅನುಭವಿಸಲು ಮನೆಯಲ್ಲಿ ಕುಳಿತು ನೋಡುವುದರಲ್ಲಿ ಕಳೆಯುತ್ತದೆ. ಮತಗಟ್ಟೆಯ ಹತ್ತಿರವೂ ಹೋಗುವುದಿಲ್ಲ. ಇವೆಲ್ಲವೂ ನಗರ ಪ್ರದೇಶಗಳಲ್ಲಿ ಮತದಾನದ ಪ್ರಮಾಣ ಕಡಿಮೆಯಾಗಿರುವುದರ ಕಾರಣಗಳೆಂದು ಮಾಧ್ಯಮಗಳು ಹೇಳುತ್ತಿವೆ.

Read more

ಕರ್ನಾಟಕದ `ಪವರ್‌ ಪಾಲಿಟಿಕ್ಸ್‌’

Posted on May 17, 2008May 24, 2015 by admin

ಆರು ವರ್ಷಗಳ ಹಿಂದಿನ ಸಂಗತಿಯಿದು. ಆ ಹೊತ್ತಿಗಾಗಲೇ ಎರಡೆರಡು ಬಾರಿ ಎಸ್‌.ಎಂ.ಕೃಷ್ಣರನ್ನು ಭಾರತದ ನಂಬರ್‌ ಒನ್‌ ಮುಖ್ಯಮಂತ್ರಿಯಾಗಿ `ಇಂಡಿಯಾ ಟುಡೇ’ ಗುರುತಿಸಿತ್ತು. ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಅವರನ್ನು ಹಿಂದಿಕ್ಕಿ ಕೃಷ್ಣ `ಸುಧಾರಣೆ’ಯ ಹಾದಿಯಲ್ಲಿ ಸಾಗುತ್ತಿದ್ದರು. ಈ ಸಮಯದಲ್ಲೇ ಕರ್ನಾಟಕದ ವಿದ್ಯುತ್‌ ನಿಗಮ ಮತ್ತು ಕರ್ನಾಟಕ ವಿದ್ಯುತ್‌ ಪ್ರಸರಣಾ ನಿಗಮಗಳು ತಿಳಿವಳಿಕೆ ಪತ್ರವೊಂದಕ್ಕೆ ಸಹಿ ಹಾಕುವ ಕಾರ್ಯಕ್ರಮವಿತ್ತು. ಅಲ್ಲಿ ಎಸ್‌.ಎಂ.ಕೃಷ್ಣ ಕರ್ನಾಟಕದ ವಿದ್ಯುತ್‌ ಕೊರತೆಯ ಬಗ್ಗೆ ಹೇಳುತ್ತಾ ರೈತರಿಗೆ ಉಚಿತ ವಿದ್ಯುತ್‌ ನೀಡುವುದರ ಅರ್ಥಹೀನತೆಯನ್ನು ವಿವರಿಸಿದರು. ಇಲ್ಲದ ವಿದ್ಯುತ್‌ ಅನ್ನು ಉಚಿತವಾಗಿ ಕೊಡುತ್ತೇವೆಂದು ಹೇಳುವುದರ ಬದಲಿಗೆ ಅಗತ್ಯವಿರುವುಷ್ಟು ವಿದ್ಯುತ್‌ ಉತ್ಪಾದಿಸಿ ನ್ಯಾಯಬದ್ಧ ದರದಲ್ಲಿ ಗುಣಮಟ್ಟದ ವಿದ್ಯುತ್‌ ಪೂರೈಸುವ ಅಗತ್ಯವನ್ನು ಪ್ರತಿಪಾದಿಸಿದರು.

Read more

ಪ್ರಾಯೋಗಿಕ ನಿಲುವೆಂಬ ಭ್ರಷ್ಟರ ಸಮರ್ಥನೆ

Posted on April 22, 2008May 24, 2015 by admin

ಕರ್ನಾಟಕದ ವಿಧಾನಸಭಾ ಚುನಾವಣೆಗಳು ಘೋಷಣೆಯಾದ ತಕ್ಷಣ ಬಂದ ಬೌದ್ಧಿಕ ಜಗತ್ತಿನ ಪ್ರತಿಕ್ರಿಯೆಗಳಲ್ಲಿ ಮೊದಲನೆಯದ್ದು ಮತ್ತು ಬಹಳ ಮುಖ್ಯವಾದುದು ಡಾ.ಯು.ಆರ್‌. ಅನಂತಮೂರ್ತಿಯವರದ್ದು. `ಯಾರು ಬಂದರೇನು? ಎಲ್ಲರೂ ಭ್ರಷ್ಟರೇ…’ ಎಂಬ ಸಿನಿಕ ಪ್ರತಿಕ್ರಿಯೆಯ ಬದಲಿಗೆ ಅವರು ರಚನಾತ್ಮಕವಾದ ರೀತಿಯಲ್ಲಿ ಪ್ರತಿಕ್ರಿಯಿಸಿದ್ದರು. ಹನ್ನೊಂದು ಅಂಶಗಳ ಜನತಾ ಪ್ರಣಾಳಿಕೆಯೊಂದರ ಕರಡನ್ನು ಬಿಡುಗಡೆ ಮಾಡಿ ಇದಕ್ಕೆ ಇನ್ನಷ್ಟು ಅಂಶಗಳನ್ನು ಸೇರಿಸಿ ಪೂರ್ಣಗೊಳಿಸೋಣ ಎಂದರು. ಈ ಪ್ರಣಾಳಿಕೆಗೆ ಬಂದ ಪ್ರತಿಕ್ರಿಯೆಗಳು ಬಹಳ ಕುತೂಹಲಕಾರಿ. ರಾಜಕೀಯ ಪಕ್ಷಗಳಿಗೆಲ್ಲಾ ಒಂದೊಂದು ಪ್ರಣಾಳಿಕೆಯಿದ್ದಂತೆ ಜನತೆಗೂ ಒಂದು ಪ್ರಣಾಳಿಕೆ ಇರುತ್ತದೆ ಎಂಬುದನ್ನು ಹೇಳಿದ ಅನಂತಮೂತಿರ್ಯವರ ನಿಲುವನ್ನು ಹಲವರು ಶ್ಲಾಘಿಸಿದರು. ವಿವಿಧ ಚಳವಳಿಗಳಲ್ಲಿ ತೊಡಗಿಕೊಂಡಿರುವ ಹಲವರು, ರಾಜಕಾರಣ ಪರಿಶುದ್ಧವಾಗಿರಬೇಕೆಂದು ಬಯಸುವವರು ಅನಂತಮೂರ್ತಿಯವರು ಮಂಡಿಸಿದ ಹನ್ನೊಂದು ಸೂತ್ರಗಳಿಗೆ ಪೂರಕವಾಗಿ ಒಂದಷ್ಟು ಅಂಶಗಳನ್ನು ಸೇರಿಸಿದರು.

Read more
  • Previous
  • 1
  • 2
  • 3
  • 4
  • 5
  • 6
  • 7
  • Next

Recent Posts

  • ಪ್ರಜೆಗಳನ್ನು ಬೆತ್ತಲಾಗಿಸುವ ಅಪಾರದರ್ಶಕ ಪ್ರಭುತ್ವ
  • ಇಂಟರ್‌ನೆಟ್ ಇಲ್ಲದ ಡಿಜಿಟಲ್ ಆರ್ಥಿಕತೆ!
  • ನೋಟು ರದ್ದತಿಯಲ್ಲಿ ಕಂಡ ಡಿಜಿಟಲ್ ಡಿವೈಡ್
  • ಮಾಧ್ಯಮ ನಿಯಂತ್ರಣದ ‘ಭದ್ರತಾ’ ತಂತ್ರಗಳು
  • ಒಮ್ಮುಖ ಪಾರದರ್ಶಕತೆಯ ತಂತ್ರಜ್ಞಾನಾಧಾರಿತ ಪ್ರಭುತ್ವ

Recent Comments

  • Balu on ಭಿನ್ನಮತದ ದ್ರವೀಕರಣ ಸಾಧ್ಯತೆಯು
  • ಖಿನ್ನಮತೀಯ on ಭಿನ್ನಮತದ ದ್ರವೀಕರಣ ಸಾಧ್ಯತೆಯು
  • ismail on ಉತ್ತಮ ಆಡಳಿತವೆಂಬ ಚುನಾವಣಾ ವಿಷಯ
  • --ಶ್ರೀ--- on ಉತ್ತಮ ಆಡಳಿತವೆಂಬ ಚುನಾವಣಾ ವಿಷಯ
  • ismail on ಸಂಪಂಗಿ ಪ್ರಕರಣದಾಚೆಗಿನ ಸತ್ಯಗಳು

Archives

  • December 2017
  • November 2017
  • March 2017
  • February 2017
  • January 2017
  • June 2014
  • March 2010
  • June 2009
  • May 2009
  • April 2009
  • March 2009
  • February 2009
  • January 2009
  • October 2008
  • September 2008
  • August 2008
  • July 2008
  • May 2008
  • April 2008
  • March 2008
  • February 2008
  • January 2008
  • December 2007
  • November 2007
  • September 2007
  • August 2007
  • July 2007
  • April 2007
  • January 2007
  • December 2006
  • October 2006
  • September 2006
  • May 2006

Categories

  • ಇ-ಹೊತ್ತು ಅಂಕಣ
  • ಒಂಟಿದನಿ (ಉದಯವಾಣಿ ಅಂಕಣ)
  • ಟಿಪ್ಪಣಿ
  • ಪ್ರಜಾವಾಣಿ
  • ಬಿಡಿ ಬರಹಗಳು
© 2021 Freedom of the present | ಈ ನಡುವಿನ ಬಿಡುವು | Powered by Minimalist Blog WordPress Theme