ವಷ್ಟು ದೊಡ್ಡ ಸಮಸ್ಯೆಗಳಲ್ಲ. ಬದಲಾವಣೆಯೊಂದರ ಭಾಗ ಎಂದು ಸಮಾಧಾನ ಪಟ್ಟುಕೊಳ್ಳಬಹುದು. ನೋಟು ಮತ್ತು ನಾಣ್ಯದ ರೂಪದಲ್ಲಿ ಹಣವಿದ್ದಾಗ ಅದರ ನಿರ್ವಹಣೆಗೊಂದು ವಿಕೇಂದ್ರೀಕೃತ ಸ್ವರೂಪವಿರುತ್ತದೆ. ಹಣಕಾಸು ಸಂಸ್ಥೆಗಳ ವಿಶ್ವಾಸಾರ್ಹತೆಯ ಕುರಿತ ಸಂಶಯ ಬಂದಾಕ್ಷಣ ಗ್ರಾಹಕರು ಏಕಾಏಕಿ ತಮ್ಮ ಹಣವನ್ನು ಹಿಂತೆಗೆಯುತ್ತಾರೆ. ರನ್ ಆನ್ ಬ್ಯಾಂಕ್ ಎಂದು ಕರೆಯುವ ಈ ಪ್ರಕ್ರಿಯೆ ಬ್ಯಾಂಕುಗಳ ಉತ್ತರದಾಯಿತ್ವವನ್ನು ಖಾತರಿ ಪಡಿಸುತ್ತವೆ. ಒಂದು ವೇಳೆ ನಗದನ್ನು ಬಳಸುವುದಕ್ಕೆ ಮಿತಿಯೊಂದನ್ನು ಹೇರಿದರೆ ಈ ಸಾಧ್ಯತೆಯೇ ಇಲ್ಲವಾಗುತ್ತದೆ. ಅಷ್ಟೇ ಅಲ್ಲ ಬ್ಯಾಂಕುಗಳು ತಮ್ಮ ಲಾಭವನ್ನು ದೃಷ್ಟಿಯಲ್ಲಿಟ್ಟುಕೊಂಡು ಜೂಜಿನಂಥ ವ್ಯವಹಾರಗಳಿಗೆ ಇಳಿದುಬಿಡುತ್ತವೆ. ಅಮೆರಿಕದ ಗೃಹಸಾಲದ ಸಮಸ್ಯೆ ಸೃಷ್ಟಿಯಾದದ್ದೇ ಹೀಗೆ.
Category: ಪ್ರಜಾವಾಣಿ
ಎನ್‌ಡಿಎ-2ಕ್ಕೂ ಹಜ್ ಸಬ್ಸಿಡಿ ಬೇಕು!
ಎರಡು ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್ ಹಜ್ ಸಬ್ಸಿಡಿಯನ್ನು ಮುಂದಿನ ಹತ್ತು ವರ್ಷಗಳಲ್ಲಿ ಸಂಪೂರ್ಣವಾಗಿ ಇಲ್ಲವಾಗಿಸಬೇಕೆಂದು ಸಂದರ್ಭದಲ್ಲಿ ನಾನು ಬರೆದ ಲೇಖನ ಇಲ್ಲಿದೆ. ಇದು ಪ್ರಜಾವಾಣಿಯ ಅಂತರಾಳ ಪುಟದಲ್ಲಿ ಪ್ರಕಟವಾಗಿತ್ತು. ಇದೇ ಸೋಮವಾರ (23 ಜೂನ್ 2014) ವಾರ್ಷಿಕ ಹಜ್ ಸಮ್ಮೇಳನದಲ್ಲಿ ಸುಷ್ಮಾ ಸ್ವರಾಜ್ ಅವರು ‘ಸುಂದರವಾದ ಉರ್ದುವಿನಲ್ಲಿ’ ಆಡಿದ ಮಾತುಗಳ ವರದಿ ಓದಿದ ಮೇಲೆ ಈ ಲೇಖನವನ್ನು ಮತ್ತೆ ಪ್ರಕಟಿಸಬಹುದು ಅನ್ನಿಸಿತು. ಆರ್ಥಿಕ ಉದಾರೀಕರಣದ ಯುಗ ಆರಂಭವಾದ ನಂತರದ ಕಾಲಘಟ್ಟದಲ್ಲಿ ಯಾವ ಸಬ್ಸಿಡಿಯನ್ನು ಹಿಂತೆಗೆದುಕೊಳ್ಳುವ ಪ್ರಸ್ತಾವಕ್ಕೂ ಸಿಗದೇ…
ಉನ್ನತ ಶಿಕ್ಷಣ: ಸುಧಾರಣೆಗೆ ಮಂತ್ರದಂಡವಿಲ್ಲ
ಉನ್ನತ ಶಿಕ್ಷಣವೆಂದರೆ ಜ್ಞಾನದ ಸೃಷ್ಟಿಗೆ ಬೇಕಾದ ತರಬೇತಿಯೇ, ಕೌಶಲ್ಯ ವೃದ್ಧಿಯೇ? ಈ ಪ್ರಶ್ನೆಗೆ ಭಾರತೀಯ ಸಂದರ್ಭದಲ್ಲಿ ಒಂದು ಸ್ಪಷ್ಟ ಉತ್ತರವಿಲ್ಲ. ಉನ್ನತ ಶಿಕ್ಷಣದ ವ್ಯಾಪ್ತಿಯಲ್ಲಿ ಬರುವ ತಾಂತ್ರಿಕ, ವೈದ್ಯಕೀಯ ಮತ್ತು ಮ್ಯಾನೇಜ್‌ಮೆಂಟ್ ಕೋರ್ಸ್‌ಗಳು ಕೌಶಲ್ಯ ವೃದ್ಧಿಯನ್ನು ಮಾತ್ರ ದೃಷ್ಟಿಯಲ್ಲಿಟ್ಟುಕೊಂಡಿವೆ.