Skip to content

Freedom of the present | ಈ ನಡುವಿನ ಬಿಡುವು

ಅಳಿಸಲಾಗದ ಅಕ್ಷರವ ಬರೆಯಲಾಗದು!

Menu
  • Privacy Policy
Menu

ಟಾಟಾ ‘ಉತ್ಪಾದಿಸಿದ’ ಅಭಿವೃದ್ಧಿಯ ಸಂಕೇತ

Posted on January 15, 2008September 23, 2014 by Ismail

`ರಸ್ತೆ’ ಎಂಬ ಪರಿಕಲ್ಪನೆ ತೀರಾ ಆಧುನಿಕವಾಗಿದ್ದರೂ ಅದನ್ನು ಹೋಲುವ ಪರಿಕಲ್ಪನೆಯೊಂದು ಎಲ್ಲ ಜೀವಿಗಳ ಬದುಕಿನಲ್ಲೂ ಇದೆ. ಪ್ರಾಣಿಗಳಂತೂ ನಿರ್ದಿಷ್ಟ ಜಾಡಿನಲ್ಲಿ (track) ತಮ್ಮ ಸಂಚಾರ ನಡೆಸುತ್ತವೆ. ಮನುಷ್ಯರೂ ಅಷ್ಟೇ, ಅವರ ಸಂಚಾರಕ್ಕೊಂದು ಕಾಲು ಹಾದಿ ಇದ್ದೇ ಇರುತ್ತದೆ.

Read more

ಜನ ವಿರೋಧಿ ಜನತಾ ದರ್ಶನ

Posted on January 9, 2008September 23, 2014 by Ismail
ಜನತಾದರ್ಶನ


ಕರ್ನಾಟಕದ ರಾಜ್ಯಪಾಲರ ಇತ್ತೀಚಿನ ಜನತಾದರ್ಶನದಲ್ಲಿ ಅವರು ಸ್ವೀಕರಿಸಿದ ಅರ್ಜಿಗಳ ಸಂಖ್ಯೆ 1200. ಇವು ಕೇವಲ ಎರಡೇ ಗಂಟೆಗಳಲ್ಲಿ ಸಂಗ್ರಹವಾದ ಅರ್ಜಿಗಳ ಸಂಖ್ಯೆ. ಈ ಅರ್ಜಿಗಳಲ್ಲಿ ದೂರದ ಗುಲ್ಬರ್ಗದಿಂದ ಮಗನ ಹೃದ್ರೋಗ ಚಿಕಿತ್ಸೆಗೆ ನೆರವು ಯಾಚಿಸಿ ಬಂದಿದ್ದ ಮಹಿಳೆಯಿಂದ ಆರಂಭಿಸಿ ವೃದ್ಧಾಪ್ಯ ವೇತನಕ್ಕಾಗಿ ತಾಲೂಕು ಕಚೇರಿಗೆ ಅಲೆದು ಸುಸ್ತಾಗಿ ಬೆಂಗಳೂರಿಗೆ ಬಂದ ವೃದ್ಧರಿದ್ದರು. ರಾಜ್ಯಪಾಲರು ಅರ್ಜಿ ಗಳನ್ನೆಲ್ಲಾ ಸ್ವೀಕರಿಸಿದರು. ಹೃದಯ ಚಿಕಿತ್ಸೆಗೆ ನೆರವು ಯಾಚಿಸಿದ್ದ 34 ಮಂದಿಗೆ ತಲಾ 25,000 ಸಾವಿರ ರೂಪಾಯಿಗಳ ಚೆಕ್‌ ವಿತರಿಸಿದರು. ಇವರಲ್ಲಿ ಕೆಲವರು ಸರಕಾರೀ ಸ್ವಾಮ್ಯದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದರೆ ಇನ್ನು ಕೆಲವರು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯ ಲಿದ್ದಾರೆ. ಜನತಾದರ್ಶನದಲ್ಲಿ ಭಾಗವಹಿಸಿದ್ದ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಸಿ.ಎನ್‌. ಮಂಜುನಾಥ್‌ `ಬಿಪಿಎಲ್‌ ಪಡಿತರ ಚೀಟಿಗಳನ್ನು ಹೊಂದಿರುವವರಿಗೆ ನಮ್ಮ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು’. 

ಕಷ್ಟದಲ್ಲಿರುವವರ ಅರ್ಜಿ ಸ್ವೀಕರಿಸಿ ಪರಿಹಾರ ನೀಡುವ ರಾಜ್ಯಪಾಲರ ದೊಡ್ಡ ಮನಸ್ಸನ್ನು ಕೊಂಡಾಡದೇ ಇರಲು ಸಾಧ್ಯವೇ? ಮಾಧ್ಯಮಗಳಲ್ಲೆಲ್ಲಾ 34 ಮಂದಿಗೆ ನೀಡಿದ 25,000 ರೂಪಾಯಿಗಳು ದೊಡ್ಡ ಸುದ್ದಿಯೇ ಆಯಿತು. ಮುಂದಿನ ಜನತಾದರ್ಶನದ ಹೊತ್ತಿಗೆ ಇದೇ ಬೇಡಿಕೆಯುಳ್ಳ ಮತ್ತಷ್ಟು ಮಂದಿ ರಾಜ್ಯಪಾಲರಿಗಾಗಿ ಕಾಯುತ್ತಾ ಸರದಿ ಸಾಲಿನಲ್ಲಿ ನಿಲ್ಲುವುದರಲ್ಲಿ ಸಂಶಯವಿಲ್ಲ. ದಯಾಳುವಾದ ರಾಜ್ಯಪಾಲರು ಅವರಿಗೂ ಒಂದಷ್ಟು ದುಡ್ಡನ್ನು ಹೊಂದಿಸಿ ಕೊಡಬಹುದು. ಅದೂ ಮಾಧ್ಯಮಗಳಲ್ಲಿ ಸುದ್ದಿಯಾಗಬಹುದು.

Read more

ಲೈಂಗಿಕ ವೃತ್ತಿ ನಿರತಳ ಎರಡು ರಾತ್ರಿಗಳು

Posted on December 17, 2007April 10, 2019 by Ismail

ನಳಿನಿ ಜಮೀಲಾ– ಈ ಹೆಸರು ಕೇರಳದಲ್ಲಿ ಜನಜನಿತ. ಕಾರಣ ಆಕೆ ಬರೆದ ಆತ್ಮಕಥೆ.`ಲೈಂಗಿಕ ವೃತ್ತಿ ನಿರತಳೊಬ್ಬಳ ಆತ್ಮಕತೆ’ ಎಂಬ ಶೀರ್ಷಿಕೆಯ ಈ ಪುಸ್ತಕ ಸಂಪ್ರದಾಯಬದ್ಧ ಮನಸ್ಸುಗಳನ್ನೂ ಸ್ತ್ರೀವಾದಿಗಳನ್ನೂ ಏಕಕಾಲದಲ್ಲಿ ಕೆಣಕಿತ್ತು. ವೇಶ್ಯೆಯಾಗಿರುವುದೂ ಒಂದು ವೃತ್ತಿಯಾಗಬಹುದು ಎಂದು ಧೈರ್ಯವಾಗಿ ಹೇಳುವ ಮಹಿಳೆ ಸದ್ಯ ಕೇರಳಾ ಸೆಕ್ಸ್‌ ವರ್ಕರ್ಸ್‌ ಫೋರಂನ ಸಂಚಾಲಕಿಯಾಗಿದ್ದಾರೆ. ಪ್ರಸ್ತುತ ಲೇಖನದಲ್ಲಿ ತಮ್ಮ ಎರಡು ರಾತ್ರಿಗಳ ನೆನಪುಗಳನ್ನು ದಾಖಲಿಸಿದ್ದಾರೆ. ನಳಿನಿ ಜಮೀಲಾರ ಮಾತುಗಳನ್ನು ಮಲಯಾಳಂನಲ್ಲಿ ಪಿ.ಸಿ. ಹರೀಶ್‌ ಲೇಖನ ರೂಪಕ್ಕೆ ಇಳಿಸಿದ್ದರು. ಅದನ್ನಿಲ್ಲಿ ಅನುವಾದಿಸಲಾಗಿದೆ.

Read more

ಕರ್ನಾಟಕ ರಾಜಕಾರಣದ ರಕ್ಷಣಾ ಪರ್ವವು

Posted on November 16, 2007May 24, 2015 by Ismail

`ಜಾತ್ಯತೀತತೆಯ ರಕ್ಷಣೆ’ ಮತ್ತು `ಸ್ವ ಪಕ್ಷ ರಕ್ಷಣೆ’ಗಳೆರಡರ ಹೊಣೆಯನ್ನೂ ಹೊತ್ತ ಕುಟುಂಬವೊಂದಿದ್ದರೆ ಅದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರದ್ದು. ಈ `ರಕ್ಷಣೆ’ಗಳ ಕಾರಣಕ್ಕಾಗಿ ಅದು ಕೆಲವು ತೀರ್ಮಾನಗಳನ್ನು ಕೈಗೊಳ್ಳುತ್ತದೆ. ಇವು ಕೌಟುಂಬಿಕ ತೀರ್ಮಾನವಾಗಿದ್ದರೂ ಅದನ್ನು ಜೆಡಿಎಸ್‌ ಎಂಬ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌.ಡಿ.ದೇವೇಗೌಡರು ಕೈಗೊಂಡಂತೆ ಇರುತ್ತವೆ. ಇಲ್ಲವೇ ಪಕ್ಷ ಸಂಘಟನೆಯಲ್ಲಿ/ಸರಕಾರದಲ್ಲಿ ಇರುವ ಅವರ ಮಕ್ಕಳು ಕೈಗೊಂಡಂತೆ ಕಾಣಿಸುತ್ತವೆ. ತೀರಾ ಮುಖ್ಯವಾದ ವಿಚಾರವಾಗಿದ್ದರೆ ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಮಾರ್ಗದರ್ಶನದಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಕೈಗೊಂಡಂತೆ ಇರುತ್ತದೆ.

Read more

ಸಾವಿರ ವರ್ಷ ಬದುಕಬೇಕಿದ್ದ ಜೀವ

Posted on November 14, 2007May 24, 2015 by Ismail

<div style="text-align: center">
<img src="/files/images/veenadhari_0.jpg" alt="" width="318" height="325" />
</div>
<blockquote>
<span style="color: #333399">
ಸಾವಿರಾರು ವರ್ಷ ಬದುಕುಳಿಯಲೇ ಬೇಕಾಗಿದ್ದ ಜೀವ ವೀಣಾಧರಿಯವರದ್ದು. ಎಚ್ಐವಿ ಬಾಧಿತರೆಲ್ಲರಲ್ಲೂ ಜೀವನೋತ್ಸಾಹವನ್ನು ಪುಟಿಯುವಂತೆ ಮಾಡಿವರೀಕೆ. ನಾಲ್ಕು ವರ್ಷಗಳ ಹಿಂದೆ ಪರೀಕ್ಷೆಯೊಂದಕ್ಕಾಗಿ ಮಂಗಳೂರಿನಲ್ಲಿದ್ದಾಗ ವೀಣಾರ ಪರಿಚಯವಾಯಿತು. ನಾನು ಉಳಿದುಕೊಂಡಿದ್ದ ಗೆಳೆಯರ ಮನೆಯ ಸಮೀಪವೇ ವೀಣಾ ಅವರ ಮನೆ ಮತ್ತು ಕಚೇರಿ. ನನ್ನ ಮಂಗಳೂರಿನ ಗೆಳೆಯರೆಲ್ಲರಿಗೂ ಪರಿಚಿತರೂ ಹತ್ತಿರದವರೂ ಆಗಿದ್ದ ವೀಣಾ ಅವರ ಬದುಕಿನ ಕಥೆ ಕೇಳಿ ನನಗೂ ಕುತೂಹಲ ಉಂಟಾಯಿತು. ಮೆಂಡೋನ್ಸಾ ಕಾಂಪೌಂಡ್ ನಲ್ಲಿದ್ದ ನಮ್ಮ ಮನೆಯಲ್ಲಿ ಕುಳಿತು ಆ ಸಂಜೆ ವೀಣಾ ಸುಮಾರು ಎರಡು ಗಂಟೆಗಳ ಕಾಲ ಮಾತನಾಡಿದ್ದರು. ಅದಷ್ಟನ್ನೂ ನಾನು ಧ್ವನಿಮುದ್ರಿಸಿದ್ದೆ. ಅದರ ಆಯ್ದ ಭಾಗಗಳನ್ನು ಒಂದು ಲೇಖನವಾಗಿಸಿ ಉದಯವಾಣಿಯ ಮಹಿಳಾ ಸಂಪದ ಪುರವಣಿಯಲ್ಲಿ ಪ್ರಕಟಿಸಿದ್ದೆ. ವೀಣಾರ ದಿಟ್ಟ ನಿಲುವುಗಳನ್ನು ಹೊರಜಗತ್ತಿಗೆ ಪರಿಚಯಿಸಿದ ಮೊದಲ ಬರೆಹ ಇದು. ಆಮೇಲೆ 'ತರಂಗ' ವಾರಪತ್ರಿಕೆ ಇವರ ಬದುಕಿನ ಕತೆಯನ್ನು ಮುಖಪುಟ ಲೇಖನವಾಗಿ ಪ್ರಕಟಿಸಿತು. ಹಾಯ್ ಬೆಂಗಳೂರಿನ ರವಿ ಬೆಳಗರೆಯವರಂತೂ ವೀಣಾರ ಆಂದೋಲನಕ್ಕೆ ಸಕಲ ರೀತಿಯ ನೆರವುಗಳನ್ನು ನೀಡಿದರು. ಅಷ್ಟೇ ವೀಣಾರನ್ನು ತಮ್ಮ ಮನೆಯ ಸದಸ್ಯರಂತೆ ನೋಡಿಕೊಂಡರು. ಎಚ್ ಐವಿಯೊಂದಿಗೆ ನೇರ ಸಂಬಂಧವೇ ಇಲ್ಲದ ಮೆದುಳಿನ ರಕ್ತ ಸ್ರಾವದಿಂದ ವೀಣಾ ತೀರಿಕೊಂಡರು. ಅವರ ನೆನಪಿಗಾಗಿ ಈ ಹಳೆಯ ಲೇಖನವನ್ನು ಇಲ್ಲಿ ಪ್ರಕಟಿಸುತ್ತಿದ್ದೇನೆ.</span>
</blockquote>

Read more

ಮುಸ್ಲಿಮರಾದರೆ ಸುಮ್ಮನಿರುತ್ತಿದ್ದರೇ?

Posted on September 28, 2007May 24, 2015 by Ismail

ಕೋಮು ಸೌಹಾರ್ದವೇದಿಕೆ ಧರಣಿನನ್ನ ಹೆಸರು ಇಸ್ಮಾಯಿಲ್ ಎಂದಿರುವುದರಿಂದ ಅನೇಕ ಸಂದರ್ಭಗಳಲ್ಲಿ ನನಗೆ ಬೇಕಿಲ್ಲದಿದ್ದರೂ ನಾನು ಮುಸ್ಲಿಮರ ಪ್ರತಿನಿಧಿಯಾಗಿಬಿಡುತ್ತೇನೆ. ಮತ-ಧರ್ಮದ ಕುರಿತ ನನ್ನ ವೈಯಕ್ತಿಕ ನಿಲುವುಗಳ ಬಗ್ಗೆ ಅರಿವಿರುವ ಹತ್ತಿರದ ಗೆಳೆಯರನ್ನು ಹೊರತು ಪಡಿಸಿದರೆ ನಾನೊಬ್ಬ ಮುಸ್ಲಿಮ ಎಂಬ ಪೂರ್ವಗ್ರಹದೊಂದಿಗೆ ಚರ್ಚೆಗಿಳಿಯುವ ಅನೇಕರಿದ್ದಾರೆ. ಈ ಬಗೆಯ ಚರ್ಚೆಗಳಿಂದ ದೂರ ಉಳಿಯಲು ನಾನು ಪ್ರಯತ್ನಿಸಿದರೂ ಕೆಲವೊಮ್ಮೆ ಅದರಿಂದ ಪಾರಾಗಲು ಸಾಧ್ಯವಾಗುವುದಿಲ್ಲ.

Read more

ಇದ್ದವರಿಬ್ಬರಲ್ಲಿ ಕದ್ದವರಾರು?

Posted on September 24, 2007May 24, 2015 by Ismail

ಕರ್ನಾಟಕದಲ್ಲಿ ಎಸ್‌.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದದ್ದು ಮತ್ತು ಆ ಅವಧಿಯದ್ದಕ್ಕೂ ಕರ್ನಾಟಕ ಬರದ ಬಾಧೆಯನ್ನು ಅನುಭವಿಸಿದ್ದನ್ನು ಬಹುಶಃ ಯಾರೂ ಮರೆತಿರಲಿಕ್ಕಿಲ್ಲ. ಈ ಅವಧಿಯಲ್ಲಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಅವರ ಸಂಪುಟ ಸಹೋದ್ಯೋಗಿಗಳಾದ ಧರ್ಮಸಿಂಗ್‌, ಮಲ್ಲಿಕಾರ್ಜುನ ಖರ್ಗೆ ಮುಂತಾದವರು ಕೇಂದ್ರ ಸರಕಾರ ಬರ ಪರಿಹಾರಕ್ಕೆ ಅಗತ್ಯವಿರುವ ಸಂಪನ್ಮೂಲವನ್ನು ಒದಗಿಸುತ್ತಿಲ್ಲ ಎಂದು ಮೇಲಿಂದ ಮೇಲೆ ಹೇಳಿದ್ದೂ ಪತ್ರಿಕೆಗಳನ್ನು ಓದುವ, ಟಿ.ವಿ.ನೋಡುವ ಎಲ್ಲರಿಗೂ ನೆನಪಿರಬೇಕು.ಆಗ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌.ಡಿ.ಎ. ಸರಕಾರವಿತ್ತು. ಕರ್ನಾಟಕದ ಅನಂತಕುಮಾರ್‌ ಮತ್ತು ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದ ವೆಂಕಯ್ಯ ನಾಯ್ಡು ಕೇಂದ್ರ ಸಚಿವ ಸಂಪುಟದಲ್ಲಿದ್ದರು. ಕೇಂದ್ರದ ನೆರವಿಗೆ ಸಂಬಂಧಿಸಿದಂತೆ ಕರ್ನಾಟಕದ ಅಧಿಕಾರಾರೂಢ ಕಾಂಗ್ರೆಸ್ಸಿಗರ ಟೀಕೆ ಹೆಚ್ಚುತ್ತಲೇ ಹೋದಾಗ ಇಬ್ಬರೂ ಕೇಂದ್ರ ಸಚಿವರು ಪ್ರತಿಕ್ರಿಯಿಸಿದ್ದರು. ಕೇಂದ್ರ ಬರ ಪರಿಹಾರಕ್ಕೆಂದು ಒದಗಿಸಿದ್ದ ಹಣವನ್ನು ರಾಜ್ಯ ಸರಿಯಾಗಿ ಬಳಸಿಕೊಂಡಿಲ್ಲ. ಬಹಳಷ್ಟು ಹಣ ಬಳಸದೆಯೇ ಲ್ಯಾಪ್ಸ್‌ (laps) ಆಗಿದೆ ಎಂದಲ್ಲಾ ಗದ್ದಲವೆಬ್ಬಿಸಿದ್ದರು. ಇದಕ್ಕೆ ಕರ್ನಾಟಕದಲ್ಲಿ ವಿರೋಧ ಪಕ್ಷವಾಗಿದ್ದ ಬಿಜೆಪಿಯ ಜಗಧೀಶ್‌ ಶೆಟ್ಟರ್‌, ಬಿ.ಎಸ್‌.ಯಡಿಯೂರಪ್ಪ, ಕೆ.ಎಸ್‌.ಈಶ್ವರಪ್ಪ ಮುಂತಾದವರೆಲ್ಲಾ ಧ್ವನಿಗೂಡಿಸಿ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

Read more

ಅಪ್ಪ, ನಕ್ಷತ್ರ ಮತ್ತು ಜಿ.ಟಿ.ಎನ್

Posted on August 5, 2007May 24, 2015 by Ismail

 

ಜಿ. ಟಿ. ನಾರಾಯಣರಾವ್
ಜಿ.ಟಿ. ನಾರಾಯಣರಾವ್

ನಾವಿನ್ನೂ ಚಿಕ್ಕವರು. ನಾನು ಐದನೇ ಕ್ಲಾಸಿನಲ್ಲಿದ್ದೆ ಎನಿಸುತ್ತದೆ. ನಮ್ಮ ಅಪ್ಪನಿಗೆ ಒಂದು ಕಿರಾಣಿ ಅಂಗಡಿಯಿತ್ತು. ಪ್ರತೀ ಮಂಗಳವಾರ ನಸುಕಿಗೇ ಎದ್ದು ಅಪ್ಪ ಸೈಕಲ್‌ ಹತ್ತಿ ಹಾಸನದ ಸಂತೆಗೆ ಹೊರಡುತ್ತಿದ್ದರು. ವಾರವಿಡೀ ಅಂಗಡಿಗೆ ಬೇಕಾದ ಸರಕನ್ನೆಲ್ಲಾ ಆ ದಿನ ಸಂತೆಯಲ್ಲಿ ಖರೀದಿಸಿ ಗಾಡಿ ರಾಜಣ್ಣನ ಗಾಡಿಗೆ ತುಂಬಿಸಿ ರಾತ್ರಿ ಎಂಟು ಗಂಟೆಗೆ ಗಾಡಿಯ ಜತೆಗೇ ಮನೆಗೆ ಹಿಂದಿರುಗುತ್ತಿದ್ದರು. ಮಂಗಳವಾರವಿಡೀ ಅಪ್ಪ ಮನೆಯಲ್ಲಿ ಇರುತ್ತಿರಲಿಲ್ಲವಾದ್ದರಿಂದ ಶಾಲೆಯಿಂದ ಹಿಂದಿರುಗಿದ ತಕ್ಷಣ ನಾನೂ ನನ್ನ ತಮ್ಮ ಮನೆಯಲ್ಲಿರುವ ರೇಡಿಯೋ, ಗಡಿಯಾರ, ಮೂಲೆಯಲ್ಲಿ ಮುಸುಕು ಹೊದ್ದು ತಣ್ಣಗೆ ಕುಳಿತಿರುತ್ತಿದ್ದ ನೀರೆತ್ತುವ ಡೀಸೆಲ್‌ ಪಂಪ್‌ಗಳ `ತಂತ್ರಜ್ಞಾನ'ವನ್ನು ಅರಿಯಲು ಹರಸಾಹಸ ಮಾಡುತ್ತಿದ್ದೆವು. ಅಮ್ಮನ ಕಣ್ಣು ತಪ್ಪಿಸಿ ಮಾಡುವ ಈ ಕೆಲಸಕ್ಕಾಗಿ ನಾವು ಬಳಸುತ್ತಿದ್ದ ತಂತ್ರಗಳದ್ದೇ ಒಂದು ದೊಡ್ಡ ಕಥೆಯಾಗಿಬಿಡುತ್ತದೆ.

Read more

ಹಿರಿತೆರೆಯಲ್ಲಿ ಕಾಣಿಸದ ಸೀತಾರಾಂ ಮ್ಯಾಜಿಕ್

Posted on July 31, 2007May 24, 2015 by Ismail

ಕಿರುತೆರೆಯ ಸ್ಟಾರ್ ನಿರ್ದೇಶಕ ಟಿ ಎನ್ ಸೀತಾರಾಂ 'ಮೀರಾ ಮಾಧವ ರಾಘವ' ಎಂಬ ಸಿನಿಮಾ ನಿರ್ದೇಶಿಸಿದ್ದಾರೆ. ಈ ಚಿತ್ರದ ಪ್ರೀಮಿಯರ್ ಪ್ರದರ್ಶನಕ್ಕೇ ಹೋಗಿದ್ದೆ. ನೋಡಿ ನಿರಾಶೆಯಾಯಿತು.

Read more

ತೇಜಸ್ವಿ ನೆನಪು

Posted on April 11, 2007May 24, 2015 by Ismail

ತೇಜಸ್ವಿಯವರ ಕಿರಗೂರಿನ ಗಯ್ಯಾಳಿಗಳು ಕತೆಯ ಆರಂಭದ ಸಾಲುಗಳು ಹೇಳುವಂತೆ `ಎಲ್ಲಾ ಶುರುವಾಗಿದ್ದು ಕಿರಗೂರಿನ ಮೇಲೆ ಮೂರು ರಾತ್ರಿ, ಮೂರು ಹಗಲು ಇದ್ದಕ್ಕಿದ್ದಂತೆ ಬೀಸಿದ ಬಿರುಗಾಳಿಯ ದೆಸೆಯಿಂದ’. ನನಗೂ ತೇಜಸ್ವಿ ಪರಿಚಯವಾಗಿದ್ದು ಹೀಗೆಯೇ.

Read more

Posts pagination

  • Previous
  • 1
  • …
  • 3
  • 4
  • 5
  • 6
  • 7
  • Next
May 2026
M T W T F S S
 123
45678910
11121314151617
18192021222324
25262728293031
« Jul    
  • July 2024
  • December 2017
  • November 2017
  • March 2017
  • February 2017
  • January 2017
  • June 2014
  • March 2010
  • June 2009
  • May 2009
  • April 2009
  • March 2009
  • February 2009
  • January 2009
  • October 2008
  • September 2008
  • August 2008
  • July 2008
  • May 2008
  • April 2008
  • March 2008
  • February 2008
  • January 2008
  • December 2007
  • November 2007
  • September 2007
  • August 2007
  • July 2007
  • April 2007
  • January 2007
  • December 2006
  • October 2006
  • September 2006
  • May 2006
  • ಅಲೆಯೂ ನೀರೂ ಎರಡಲ್ಲ ಎಂದು ಅರಿವಾದಾಗ…
  • ನನ್ನ ಬದುಕಿನ ಗುರುವಾದ ನಾರಾಯಣ ಗುರು
  • ಪ್ರಜೆಗಳನ್ನು ಬೆತ್ತಲಾಗಿಸುವ ಅಪಾರದರ್ಶಕ ಪ್ರಭುತ್ವ
  • ಇಂಟರ್‌ನೆಟ್ ಇಲ್ಲದ ಡಿಜಿಟಲ್ ಆರ್ಥಿಕತೆ!
  • ನೋಟು ರದ್ದತಿಯಲ್ಲಿ ಕಂಡ ಡಿಜಿಟಲ್ ಡಿವೈಡ್
  • ಇ-ಹೊತ್ತು ಅಂಕಣ
  • ಒಂಟಿದನಿ (ಉದಯವಾಣಿ ಅಂಕಣ)
  • ಘಟನೆಗಳು
  • ಟಿಪ್ಪಣಿ
  • ನಾರಾಯಣ ಗುರು
  • ಪ್ರಜಾವಾಣಿ
  • ಬಿಡಿ ಬರಹಗಳು
  • Privacy Policy
© 2026 Freedom of the present | ಈ ನಡುವಿನ ಬಿಡುವು | Powered by Superbs Personal Blog theme